Back To Top

 ಆರ್‌ಸಿಬಿ ವಿಜಯೋತ್ಸವದಲ್ಲಿ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 13 ಬಲಿ
June 4, 2025

ಆರ್‌ಸಿಬಿ ವಿಜಯೋತ್ಸವದಲ್ಲಿ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 13 ಬಲಿ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿದ್ದು, ಏಳು ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ಹೃದಯಾಘಾತವಾದರೆ, ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನಿಸುವ ವೇಳೆ ಸಾವಿಗೀಡಾಗಿದ್ದಾರೆ. ಉಳಿದಂತೆ ಇನ್ನೂ 13ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವೊಜಯೋತ್ಸವ ಕಾರ್ಯಕ್ರಮವನ್ನು 5 ಗಂಟೆಗೆ ಆಯೋಜನೆ ಮಾಡಲಾಗಿತ್ತು. ಇದಕ್ಕೂ ಮುನ್ನ ಕ್ರೀಡಾಂಗಣಕ್ಕೆ ಅಭಿಮಾನಿಗಳ ಪ್ರವೇಶಕ್ಕೆ ಎರಡು ಗೇಟ್‌ಗಳನ್ನು ಮಾತ್ರ ನಿಗದಿ ಮಾಡಲಾಯಿತು. ಈ ವೇಳೆ ಮುಂಬದಿಯಲ್ಲಿದ್ದ ಎಲ್ಲ ಅಭಿಮಾನಿಗಳನ್ನು 13 ಮತ್ತು 14ನೇ ಗೇಟ್‌ಗೆ ಕಳಿಸಿ ಅಲ್ಲಿಂದ ಪ್ರವೇಶ ಪಡೆಯುವಂತೆ ಸೂಚಿಸಲಾಯಿತು. ಆಗ ಸುಮಾರು 10 ಸಾವಿರಕ್ಕೂ ಅಧಿಕ ಅಭಿಮಾನಿಗಳು ಏಕಾಏಕಿ ಹಿಂಬದಿಯ ಗೇಟ್‌ ಬಳಿ ಹೋಗಿ ನಿಂತುಕೊಂಡಿದ್ದರು. ಈ ವೇಳೆ ಗೇಟ್‌ನಿಂದ ಒಬ್ಬೊಬ್ಬರನ್ನೇ ಪರಿಶೀಲನೆ ಮಾಡಿ ಬಿಡುವುದನ್ನು ತಡೆದುಕೊಳ್ಳಲಾರದ ಅಭಿಮಾನಿಗಳ ನೂಕು ನುಗ್ಗಲು ಹೆಚ್ಚಾಗಿ ಗೇಟ್ ಅನ್ನು ಮುರಿದು ಒಳಗೆ ನುಗ್ಗಿದ್ದಾರೆ. ಈ ವೇಳೆ ಗೇಟ್ ಮುಂದೆಯೇ ನಿಂತಿದ್ದ 20ಕ್ಕೂ ಅಧಿಕ ಜನರು ಕಾಲ್ತುಳಿತಕ್ಕೆ ಸಿಲುಕಿದ್ದಾರೆ.

ಕಾಲ್ತುಳಿತ ಸಂಭವಿಸುತ್ತಿದ್ದಂತೆ ನಿಯಂತ್ರಣ ಸಿಗದ ಅಭಿಮಾನಿಗಳು ಕಾಲಡಿ ಸಿಕ್ಕವರ ಮೇಲೆಯೇ ಹತ್ತಿಕೊಂಡು ಹೋಗಿದ್ದು, ಇದರಿಂದ ಗಂಭೀರ ಗಾಯಗೊಂಡವರನ್ನು ಎಳೆದುಕೊಂಡು ಆಸ್ಪತ್ರೆಗೆ ಸಾಗಿಸಲಾಯಿತಾದರೂ 13 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.

Prev Post

ರಾಜ್ಯದ ಹಿತಕ್ಕಾಗಿ ನಮ್ಮವರು ಮಿತಿಯಲ್ಲಿ ಇರಬೇಕು: ಡಿಸಿಎಂ

Next Post

ಬೆಂಗಳೂರು ಕಾಲ್ತುಳಿತ: ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲು

post-bars

Leave a Comment

Related post