Back To Top

 ಆರ್‌ಸಿಬಿ ವಿಜಯೋತ್ಸವದ ದುರಂತ: ಪರಿಹಾರ ಮೊತ್ತ 25 ಲಕ್ಷ ರೂಪಾಯಿಗೆ ಏರಿಕೆ
June 8, 2025

ಆರ್‌ಸಿಬಿ ವಿಜಯೋತ್ಸವದ ದುರಂತ: ಪರಿಹಾರ ಮೊತ್ತ 25 ಲಕ್ಷ ರೂಪಾಯಿಗೆ ಏರಿಕೆ

ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ .56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೆ ತರಾತುರಿಯಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿದ ಕಾರಣ ಈ ಘಟನೆ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಈ ದುರಂತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರ ಘೋಷಿಸಿದ ಪರಿಹಾರ ಮೊತ್ತ ಕಡಿಮೆ ಎಂದು ವಿಪಕ್ಷಗಳು ಆರೋಪ ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಘೋಷಿಸಿದ ಪರಿಹಾರವನ್ನು ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಆರಂಭದಲ್ಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಮೊತ್ತ ಘೋಷಿಸಿತ್ತು. ಆದರೆ ಕೇರಳದಲ್ಲಿ ಆನೆ ತುಳಿದು ಮೃತಪಟ್ಟ ವ್ಯಕ್ತಿಗೆ ಇದಕ್ಕಿಂತ ಹೆಚ್ಚಿನ ಮೊತ್ತ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಆದರೆ ಸರ್ಕಾಕರ ನಿರ್ಲಕ್ಷಕ್ಕೆ ಬಲಿಯಾದವರಿಗೆ ಕೇವಲ 10 ಲಕ್ಷ ರೂಪಾಯಿ ಮಾತ್ರ ಘೋಷಿಸಿದೆ ಎಂದು ವಿಪಕ್ಷಗಳು ಆರೋಪಿಸಿತ್ತು. ಇತ್ತ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಪರಿಹಾರ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದ ಆರ್‌ಸಿಬಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಇದೇ ವೇಳೆ ಗಾಯಗೊಂಡವರಿಗೆ ಆರ್‌ಸಿಬಿ ಫ್ಯಾನ್ಸ್ ಕೇರ್ ಸ್ಥಾಪಿಸಿ ಈ ಮೂಲಕ ನೆರವಾಗುವುದಾಗಿ ಘೋಷಿಸಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ದುರಂತದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಹೊಣೆಗಾರಿಕೆ ಕುರಿತು ಆರೋಪಿಗಳು ಕೇಳಿಬರುತ್ತಿದೆ. ಈ ಕುರಿತು ದೂರು ಕೂಡ ದಾಖಲಾಗಿದೆ. ಇತ್ತ ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಘಟನೆ ನಡೆದ ಬಳಿಕ ರಾಜ್ಯ ಕ್ರಿಕೆಟ್ ಸಂಸ್ಥೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದೆ.

ಮೃತರ ಕುಟುಂಬಕ್ಕೆ ಒಟ್ಟು 40 ಲಕ್ಷ ರೂ ಪರಿಹಾರ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಮೊತ್ತವಾಗಿ ತಲಾ 40 ಲಕ್ಷ ರೂಪಾಯಿ ಸಿಗಲಿದೆ.

ಸರ್ಕಾರದ ಪರಿಹಾರ ಮೊತ್ತ: 25 ಲಕ್ಷ ರೂಪಾಯಿ

ಆರ್‌ಸಿಬಿ ಪರಿಹಾರ ಮೊತ್ತ: 10 ಲಕ್ಷ ರೂಪಾಯಿ

ಕೆಎಸ್‌ಸಿಎ ಪರಿಹಾರ ಮೊತ್ತ: 5 ಲಕ್ಷ ರೂಪಾಯಿ

ಇದನ್ನು ಓದಿ:

https://infomindz.in/chinnaswamy-kalthulitha-duranthaivaru-aropigalige-14-dinagala-nyangaa-bandana/
Prev Post

T-20 World Cup: ಕೆಎಲ್ ರಾಹುಲ್ ಔಟ್, ಸೂರ್ಯ ಕ್ಯಾಪ್ಟನ್, ಅಯ್ಯರ್‌ಗೆ ಅವಕಾಶ…

Next Post

ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ ನೀಡಲು ಚಿಂತನೆ: ಕುಮಾರಸ್ವಾಮಿ

post-bars

Leave a Comment

Related post