ರಾಜ್ಯದಲ್ಲಿ ಕೊರೋನಾ ಸೋಂಕು: ಇಬ್ಬರು ಸೋಂಕಿತರು ಸಾವು
ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಲ್ಲದೇ 67 ಜನರಿಗೆ ಕೊರೋನಾ ಪಾಸಿಟಿವ್ ಅಂತ ಪರೀಕ್ಷೆಯಿಂದ ದೃಢಪಟ್ಟಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಲ್ಲದೇ 67 ಜನರಿಗೆ ಕೊರೋನಾ ಪಾಸಿಟಿವ್ ಅಂತ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 571 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.ಇವರಲ್ಲಿ 67 ಜನರಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದೆ. ಇನ್ನೂ ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 165 ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ, 453 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 459 ಸಕ್ರೀಯ ಸೋಂಕಿತರು ಇರುವುದಾಗಿ ಹೇಳಿದೆ.