Back To Top

 ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರು: ನಾಳೆಯಿಂದ ಮಳೆ ಹೆಚ್ಚಳ
June 12, 2025

ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರು: ನಾಳೆಯಿಂದ ಮಳೆ ಹೆಚ್ಚಳ

ಬೆಂಗಳೂರು: ಈಗಾಗಲೇ ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರುವಾಗಿದೆ, ಜೂನ್ 13ರಿಂದ ಮಳೆ(Rain)ಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಇಂದಿನಿಂದಲೇ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಬೆಂಗಳೂರು ಸೇರಿ ಹಲವೆಡೆ ಬುಧವಾರ ಮಳೆಯಾಗಿತ್ತು.
ಮಂಗಳೂರು, ಕೋಟಾ, ಮುಲ್ಕಿ, ಕುಂದಾಪುರ, ಚಿಟಗುಪ್ಪ, ಭಾಲ್ಕಿ, ದಾವಣಗೆರೆ, ಬೇಗೂರು, ಹರಪನಹಳ್ಳಿ, ಬಾಳೆಹೊನ್ನೂರು, ದಾವಣಗೆರೆ, ಗೌರಿಬಿದನೂರು, ಕಕ್ಕೇರಿ, ಮೂಡುಬಿದಿರೆ, ಮಾಣಿ, ಹುಮ್ನಾಬಾದ್, ಲಕ್ಷ್ಮೇಶ್ವರ, ಲಿಂಗಸುಗೂರು, ಯಡ್ರಾಮಿ, ಕಮಲಾಪುರ, ಶಾಹಪುರ,ಬೀದರ್, ಚನ್ನಗಿರಿ, ಚಾಮರಾಜನಗರ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.
ಎಚ್ಎಎಲ್ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Prev Post

ಅಹಮದಾಬಾದ್ ವಿಮಾನ ದುರಂತ ಮಂಗಳೂರಿನ ದುರಂತವನ್ನು ನೆನಪಿಸುತ್ತದೆ: Ahmedabad Air India Crash

Next Post

ಹುಡುಗಿಯರ ಮಿಸ್‌ ಯೂಸ್ ಮಾಡೋ ಜಾಲದ ಮಾಹಿತಿ ಬಿಚ್ಚಿಟ್ಟು ಯುವಕ ಆತ್ಮಹತ್ಯೆs

post-bars

Leave a Comment

Related post