Back To Top

 ಬರ್ತ್‌ಡೇ ಪಾರ್ಟಿಯಲ್ಲಿ ವಿದೇಶಿ ಮದ್ಯ, ಗಾಂಜಾ ಸಮೇತ ಸಿಕ್ಕಿಬಿದ್ದ ತೆಲುಗು ಗಾಯಕಿ ಮಂಗ್ಲಿ
June 13, 2025

ಬರ್ತ್‌ಡೇ ಪಾರ್ಟಿಯಲ್ಲಿ ವಿದೇಶಿ ಮದ್ಯ, ಗಾಂಜಾ ಸಮೇತ ಸಿಕ್ಕಿಬಿದ್ದ ತೆಲುಗು ಗಾಯಕಿ ಮಂಗ್ಲಿ

ಬೆಂಗಳೂರು: ತೆಲುಗು, ಕನ್ನಡ ಸೇರಿ ಸಿನಿಮಾಗಳಲ್ಲಿ ಸೂಪರ್‌ ಹಿಟ್ ಹಾಡುಗಳಿಗೆ ಧ್ವನಿಯಾಗಿರುವ ಮಂಗ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಹಾಗೂ ತೆಲುಗಿನ ಜಾನಪದ ಗಾಯಕಿ ಮಂಗ್ಲಿ ರೆಸಾರ್ಟ್ ಒಂದರಲ್ಲಿ ತನ್ನ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿಯನ್ನು ನೀಡಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದು, ಆ ಪಾರ್ಟಿಯಲ್ಲಿ ವಿದೇಶಿ ಮದ್ಯ ಹಾಗೂ ಗಾಂಜಾ ಸಿಕ್ಕಿದೆ. ಅಲ್ಲದೆ ಪಾರ್ಟಿಯಲ್ಲಿ ಭಾಗಿಯಾದವರ ವೈದ್ಯಕೀಯ ತಪಾಸೆಣೆಯಲ್ಲಿಯೂ ಇದು ಖಾತ್ರಿಯಾಗಿದೆ. ಹೈದರಾಬಾದ್ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿ ಬರ್ತ್‌ಡೇ ಪಾರ್ಟಿಯನ್ನು ಆಯೋಜಿಸಿದ್ದರು. ಈ ಪಾರ್ಟಿಗೆ ತೆಲುಗು ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು. ತಡರಾತ್ರಿ ಮಂಗ್ಲಿ ಬರ್ತ್‌ಡೇ ಪಾರ್ಟಿ ನಡೆಯುವಾಗ ದಿಢೀರನೇ ಪೊಲೀಸರು ದಾಳಿ ಮಾಡಿದ್ದರು. ಈ ಪಾರ್ಟಿಯಲ್ಲಿ ಸುಮಾರು 50 ಮಂದಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

Prev Post

ಕಾಂತಾರ ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು

Next Post

ವಿಮಾನ ಪತನದಲ್ಲಿ ಗುಜರಾತ್ ನಲ್ಲಿ 16ನೇ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕರಾಗಿದ್ದ ವಿಜಯ್…

post-bars

Leave a Comment

Related post