Back To Top

 ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ

ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ

ಅಹ್ಮದಾಬಾದ್ ನಾ ದುರಂತ ಸ್ಥಳಕ್ಕೆ ಪ್ರಧಾನಿ ಮಂತ್ರಿ ಭೇಟಿ ನೀಡಿ 10 ನಿಮಿಷ ಘಟನಾ ಸ್ಥಳವನ್ನ ಪರಿಶೀಲನೆ ನಡೆಸಿದ್ದಾರೆ. ವಿಮಾನದ ಇಂಧನವು ದುರ್ಘಟನಾ ಸ್ಥಳದಲ್ಲಿ ಸೋರಿಕೆಯಾಗಿದೆ.

ಗುಜರಾತ್: ಅಹ್ಮದಾಬಾದ್ ನಾ ದುರಂತ ಸ್ಥಳಕ್ಕೆ ಪ್ರಧಾನಿ ಮಂತ್ರಿ ಭೇಟಿ ನೀಡಿ 10 ನಿಮಿಷ ಘಟನಾ ಸ್ಥಳವನ್ನ ಪರಿಶೀಲನೆ ನಡೆಸಿದ್ದಾರೆ. ವಿಮಾನದ ಇಂಧನವು ದುರ್ಘಟನಾ ಸ್ಥಳದಲ್ಲಿ ಸೋರಿಕೆಯಾಗಿದೆ. ಇದ್ರಿಂದ ಯಾವುದಾದ್ರು ದುರ್ಘಟನೆ ಸಂಭವಿಸೋ ಅನುಮಾನ ಇದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕಾರಣಗಳಿಂದಾಗಿ ಭದ್ರತಾ ದೃಷ್ಟಿಯಿಂದ ಹೆಚ್ಚಿನ ಹೊತ್ತು ದುರಂತ ಸ್ಥಳದಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ರು. ಹೀಗಾಗಿ ಪ್ರಧಾನಿ ಮೋದಿ 10 ನಿಮಿಷಗಳ ಕಾಲ ಘಟನಾ ಸ್ಥಳವನ್ನು ಪರಿಶೀಲಿಸಿ ಹಿಂತಿರುಗಿದರು.

ಘಟನಾ ಸ್ಥಳ ಪರಿಶೀಲನೆ ನಡೆಸಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಿವಿಲ್ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಹ್ಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ದುರಂತದಲ್ಲಿ ಪ್ರಯಾಣಿಕರು, ಸಿಬ್ಬಂದಿ, ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಒಟ್ಟು 265 ಜನರು ಜೀವ ಕಳೆದುಕೊಂಡಿದ್ದಾರೆ. ಆದರೆ ವಿಮಾನದಲ್ಲಿದ್ದ ಓರ್ವ ವ್ಯಕ್ತಿ , ಹಾಸ್ಟೆಲ್ನಲ್ಲಿದ್ದ ಉಳಿದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವ್ರಿಗೆಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು. ಅವರಲ್ಲಿ ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನುಳಿದ 241 ಪ್ರಯಾಣಿಕರು ಅಲ್ಲೇ ಜೀವ ಬಿಟ್ಟಿದ್ದಾರೆ. ಬೋಯಿಂಗ್ ವಿಮಾನ ಹಾಸ್ಟೆಲ್ ಮೇಲೆ ಬಿದ್ದಿದ್ದರಿಂದ 24 ಮೆಡಿಕಲ್ ವಿದ್ಯಾರ್ಥಿಗಳು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನು ಓದಿ:

https://infomindz.in/kantara-chitrada-kalavida-hrudayagathathinda-savu/
Prev Post

ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ: ಮಾಧ್ಯಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

Next Post

ಅಪಘಾತದಲ್ಲಿ ಬದುಕುಳಿದ ವ್ಯಕ್ತಿ  ನೋವಲ್ಲೂ‌ ಎದ್ದು ನಡೆಯಲು ಪ್ರಾರಂಭಿಸಿದ

post-bars

Leave a Comment

Related post