ಕೋತಿಗಳ ಮಾರಣಹೋಮ: ವಿಷಪ್ರಾಶನ ಶಂಕೆ
ವನ್ಯ ಜೀವಿಗಳ ಸಂರಕ್ಷಣೆ, ಹಾವಳಿಗೆ ಕುರಿತು ಸಾಕಷ್ಟು ಕಾರ್ಯಕ್ರಮಗಳು ನಡೆಯುತ್ತಿರುವಾಗಲೇ ಕಳೆದ ವಾರವಷ್ಟೇ ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನದಿಂದ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದೆ. (Monkeys Death in Karnataka)
ಬೆಂಗಳೂರು: ವನ್ಯ ಜೀವಿಗಳ ಸಂರಕ್ಷಣೆ, ಹಾವಳಿಗೆ ಕುರಿತು ಸಾಕಷ್ಟು ಕಾರ್ಯಕ್ರಮಗಳು ನಡೆಯುತ್ತಿರುವಾಗಲೇ ಕಳೆದ ವಾರವಷ್ಟೇ ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನದಿಂದ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದೆ.
ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20 ಕ್ಕೂ ಹೆಚ್ಚು ಕೋತಿಗಳು ವಿಷಪ್ರಾಶಸನದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳಿಗೆ ಬೇರೆಡೆ ವಿಷ ಹಾಕಿ ಕೊಂದು ಇಲ್ಲಿ ತಂದು ಹಾಕಿರುವ ಅನುಮಾನ ಉಂಟಾಗಿದೆ.
ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿವೆ.
ಚಾಮರಾಜನಗರದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ್ದವು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ 20ಕ್ಕೂ ಹೆಚ್ಚು ಮಂಗಗಳ ಶವ ಪತ್ತೆಯಾಗಿವೆ. ಈ ಬಗ್ಗೆ ಗಂಭೀರ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನು ಓದಿ: