Back To Top

 ರಾಜ್ಯದಲ್ಲಿ ಮುಂದುವರಿದ ಮಳೆ: ಕರ್ನಾಟಕದ ಹಲವು ಕಡೆ ಭಾರೀ ಮಳೆ, ಶಾಲಾ ಕಾಲೇಜುಗಳಿಗೆ ರಜೆ , heavy rain, red alart
July 4, 2025

ರಾಜ್ಯದಲ್ಲಿ ಮುಂದುವರಿದ ಮಳೆ: ಕರ್ನಾಟಕದ ಹಲವು ಕಡೆ ಭಾರೀ ಮಳೆ, ಶಾಲಾ ಕಾಲೇಜುಗಳಿಗೆ ರಜೆ , heavy rain, red alart

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ. heavy rain, red alart ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ತಿಂಗಳ ಹಿಂದೆ ಚಂಡಮಾರುತದ ಬೆನ್ನಲ್ಲೇ ಮುಂಗಾರು ಮಳೆ ಪ್ರವೇಶಿಸಿತ್ತು. ಇದರ ಬೆನ್ನಲ್ಲೇ ಭಾರತದಾದ್ಯಂತ ಅದರಲ್ಲೂ ಕರ್ನಾಟಕದ karnataka ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯತೊಡಗಿತು. ಈ ವೇಳೆ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡುತ್ತಿದೆ .
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ.
ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆಯಾಗಿದೆ?
ಕ್ಯಾಸಲ್ರಾಕ್, ಕೊಪ್ಪ, ಕಮ್ಮರಡಿ, ಆಗುಂಬೆ, ಕದ್ರಾ, ಸಿದ್ದಾಪುರ, ಜಯಪುರ, ಕೊಪ್ಪ, ಎನ್ಆರ್ಪುರ, ಬೆಳ್ತಂಗಡಿ, ಅಂಕೋಲಾ, ಮೂಡುಬಿದಿರೆ, ಕಾರವಾರ, ಧರ್ಮಸ್ಥಳ, ಶಿರಾಲಿ, ಸೋಮವಾರಪೇಟೆ, ಭಾಗಮಂಡಲ, ಲೋಂಡಾ, ಪುತ್ತೂರು, ಕಳಸ, ಜೋಯ್ಡಾ, ಕಾರ್ಕಳ, ಕುಮಟಾ, ಗೇರುಸೊಪ್ಪ, ಬನವಾಸಿಯಲ್ಲಿ ಭಾರಿ ಮಳೆಯಾಗಿದೆ.
ಮುಲ್ಕಿ, ಉಡುಪಿ, ಮಂಗಳೂರು, ಮಾಣಿ, ಕುಂದಾಪುರ, ಬಂಟವಾಳ, ಶಕ್ತಿನಗರ, ಮಾಣಿ, ಖಾನಾಪುರ, ಹುಂಚದಕಟ್ಟೆ, ನಾಪೋಕ್ಲು, ತ್ಯಾಗರ್ತಿ, ಚಿಕ್ಕಬಳ್ಳಾಪುರ, ದಾವಣಗೆರೆ, ಪೊನ್ನಂಪೇಟೆ, ಕೋಟಾ, ಹಿರೆಕೆರೂರು, ಸರಗೂರು, ಹೊನ್ನಾವರ, ಸಂಕೇಶ್ವರ, ಕಿತ್ತೂರು, ಕುಷ್ಟಗಿ, ಮುದಗಲ್, ಮಾನ್ವಿ, ಹಳಿಯಾಳ, ಮುಂಡಗೋಡ, ಚನ್ನಗಿರಿ, ನಾಯಕನಹಟ್ಟಿ, ಹಗರಿಬೊಮ್ಮನಹಳ್ಳಿ, ಬರಗೂರು, ಕುಶಾಲನಗರ, ಕೋಲಾರ, ಬೇಳೂರು, ಅಜ್ಜಂಪುರ, ಪರಶುರಾಂಪುರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ banglore ಗುರುವಾರ ಅಲ್ಲಲ್ಲಿ ಮಳೆಯಾಗಿದೆ. ಎಚ್ಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿ:

Prev Post

ಜೀವಕ್ಕೆ ಕುತ್ತು ತಂದ ಆನ್‌ಲೈನ್ ಬೆಟ್ಟಿಂಗ್ : ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ:…

Next Post

ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ‌: 34ಕ್ಕೂ ಹೆಚ್ಚು ಜನ ಸಾವು: Telangana Chemical…

post-bars

Leave a Comment

Related post