ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 34ಕ್ಕೂ ಹೆಚ್ಚು ಜನ ಸಾವು: Telangana Chemical Factory Blast
ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿದೆ. ಆರಂಭದಲ್ಲಿ 12 ಜನ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆಗೆದು ಹಾಕುವಾಗ ಹಲವಾರು ಶವಗಳು ಅವಶೇಷಗಳ ಅಡಿಯಲ್ಲಿ ಪತ್ತೆಯಾಗಿತ್ತು.
ಹೈದರಾಬಾದ್: ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಾನವರು ಗುಂಪಿನಲ್ಲಿ ಕೆಲಸ ಮಾಡುವಾಗ ಅಚಾತುರ್ಯ ಸಂಭವಿಸಿದರೆ ಭಾರೀ ಪ್ರಮಾಣದ ಅನಾಹುತಗಳು ಸಂಭವಿಸುವುದು ಗಮನಿಸುತ್ತಲೇ ಇದ್ದೇವೆ. ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ factory blast ಸಂಭವಿಸಿದ್ದು ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿದೆ.
ಆರಂಭದಲ್ಲಿ 12 ಜನ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆಗೆದು ಹಾಕುವಾಗ ಹಲವಾರು ಶವಗಳು ಅವಶೇಷಗಳ ಅಡಿಯಲ್ಲಿ ಪತ್ತೆಯಾಗಿತ್ತು. Pasamailaram industrial area ಪಸಮಿಲೈರಾಮ್ ಇಂಡಸ್ಟ್ರೀಯಲ್ ಏರಿಯಾದಲ್ಲಿ ಘಟನೆ ನಡೆದಿದೆ.
ಇದರಲ್ಲಿ 31 ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ.
ಸ್ಫೋಟದ ಪರಿಣಾಮವಾಗಿ ಕೈಗಾರಿಕಾ ಶೆಡ್ ಸಂಪೂರ್ಣವಾಗಿ ನಾಶವಾಗಿದೆ. ಸ್ಫೋಟದ ತೀವ್ರತೆಗೆ ಕೆಲವು ಕಾರ್ಮಿಕರು ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟು ಸುಮಾರು 100 ಮೀಟರ್ ದೂರದಲ್ಲಿ ಕೆಳಗೆ ಬಿದ್ದಿದ್ದಾರೆ. ಸ್ಫೋಟದ ಕಾರಣವನ್ನು ಇನ್ನೂ ಖಚಿತಪಡಿಸಿಕೊಳ್ಳಲಾಗಿಲ್ಲವಾದರೂ, ಇದು ರಾಸಾಯನಿಕ ಕ್ರಿಯೆಯಿಂದ ಉಂಟಾಗಿದೆ ಎಂದು ಶಂಕಿಸಲಾಗಿದೆ. ಈ ಅವಘಡದ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನು ಓದಿ: