Back To Top

 ಲವ್ ಬ್ರೇಕಪ್ , ಯುವಕನಿಗೆ ಮಾರಣಾಂತಿಕ ಹಲ್ಲೆ: 17ರ ಹುಡುಗಿ ಸೇರಿದಂತೆ 11 ಆರೋಪಿಗಳು ವಶಕ್ಕೆ: love breakup case

ಲವ್ ಬ್ರೇಕಪ್ , ಯುವಕನಿಗೆ ಮಾರಣಾಂತಿಕ ಹಲ್ಲೆ: 17ರ ಹುಡುಗಿ ಸೇರಿದಂತೆ 11 ಆರೋಪಿಗಳು ವಶಕ್ಕೆ: love breakup case

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ತೀವ್ರ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡುಗಿ ಎಂದು ತಿಳಿದುಬಂದಿದೆ.

ನೆಲಮಂಗಲ: ಹದಿಹರೆಯದ ಪ್ರೀತಿ ಕೆಲವೊಂದು ಕಥೆ ಕವನಕ್ಕೆ ಸಾಕ್ಷಿಯಾದರೆ ಕೆಲವೊಂದು ಪ್ರೇಮ ಕಹಿ ಇತಿಹಾಸಕ್ಕೂ ಸಾಕ್ಷಿಯಾಗುತ್ತದೆ. ಅಂತಹದ್ದೇ ಹದ್ದು ಮೀರಿದ ಘಟನೆಯೊಂದು ನಡೆದಿದ್ದು ಈ ಘಟನೆಯ ಸೂತ್ರಧಾರಿ 17ರ ಯುವತಿ ಎನ್ನುವುದು ಆತಂಕಕಾರಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ತೀವ್ರ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡುಗಿ ಎಂದು ತಿಳಿದುಬಂದಿದೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡುಗಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.
ಶಾಲಾದಿನಗಲ್ಲಿಯೇ ಜೊತೆಗೆ ವ್ಯಾಸಂಗ ಮಾಡುತ್ತಿದ್ಥ 17ರ ಯುವತಿ ಪ್ರೀತಿಯಲ್ಲಿ ಬಿದ್ದಿದ್ದಾಳೆ. ಈ ಯುವಕ ಕುಶಾಲ್ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿದೆ. ಆದರೆ ಕಾಲೇಜು ಮೆಟ್ಟಿಲು ಹತ್ತಿದ ಮೇಲೆ ಪ್ರೇಮಿಗಳ ನಡುವೆ ಬಿರುಕು ಮೂಡಿದೆ. ಎರಡು ವರ್ಷದ ಪ್ರೀತಿ ಕೆಲ ದಿನಗಳ ಹಿಂದೆಯಷ್ಟೇ ಬ್ರೇಕ್ ಅಪ್ ಆಗಿದೆ. ಬ್ರೇಕ್ ಅಪ್ ಆದ ಬಳಿಕ ಯುವಕ ಕುಶಾಲ್ ಖಾಸಗಿ ಕ್ಷಣದ ಫೋಟೋಗಳನ್ನು ವೈರಲ್ ಮಾಡುವುದಾಗಿ ಹುಡುಗಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾನೆ.
ಈ ವೇಳೆ ಕುಶಾಲ್ ನನ್ನು ಕಿಡ್ನಾಪ್ ಮಾಡಿ ಅಪಹರಿಸುವಂತೆ ಹುಡುಗಿ ತನ್ನ ಸ್ನೇಹಿತರಿಗೆ ಹೇಳಿದ್ದಾಳೆ. ಅದರಂತೆ ಹುಡುಗಿಯ ಸ್ನೇಹಿತರು, ಕುಶಾಲ್ ನನ್ನು ಸಂಪರ್ಕಿಸಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಬಾ ಅಂತ ಬಾಗಲಗುಂಟೆಯ ಎಜಿಪಿ ಲೇಔಟ್ ಗೆ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಯುವಕ ಕುಶಾಲ್ ನನ್ನು ಹುಡುಗಿ ಸ್ನೇಹಿತರು ಅಪಹರಿಸಿದ್ದಾರೆ.
ಕುಶಾಲ್ ನನ್ನು ಕಾರಿನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಕಾರಿನಲ್ಲಿ ಹುಡುಗಿಯೂ ಇದ್ದಳು. ನಂತರ ಹುಡುಗಿ ಮುಂದೆಯೇ ಆರೋಪಿಗಳು ಕುಶಾಲ್ ಮೇಲೆ ಹಲ್ಲೆ ಮಾಡಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಮೇಲೆ ಆರೋಪಿಗಳು ಹುಡುಗಿಯ ಮುಂದೆಯೇ ಯುವಕ ಕುಶಾಲ್ ನ ಬಟ್ಟೆ ಬಿಚ್ಚಿಸಿ ಬೆತ್ತಲುಗೊಳಿಸಿ ವಿಕೃತಿ ಮೆರೆದಿದ್ದಾರೆ. ಯುವಕ ಕುಶಾಲ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಪ್ರಕರಣ ಸಂಬಂಧ ಹುಡುಗಿ ಸೇರಿದಂತೆ 11 ಜನರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ 8 ಜನ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆರೋಪಿಗಳಾದ ಶಶಾಂಕ್ ಗೌಡ, ಸಲ್ಮಾನ್, ಯಶ್ವಂತ್, ವಿದ್ಯಾರ್ಥಿಗಳಾದ ತೇಜಸ್, ರಾಕೇಶ್, ರಾಹುಲ್ ಮತ್ತು ಹೇಮಂತ್ ಬಿಡುಗಡೆಯಾದವರು. ಆರೋಪಿ ಹೇಮಂತ್ ಹಲವು ಬಾರಿ ಹಲ್ಲೆ ಪ್ರಕರಣದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ವಿಚಾರಣೆ ನಡೆ‌ಸುತ್ತಿದ್ದಾರೆ. ಪ್ರಕರಣ ಗಂಭೀರ ತಿರುವು ಪಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನು ಓದಿ:

Prev Post

ಬಚ್ಚಲು ಮನೆ ನೀರು ಕಾಯಿಸುವ ಹಂಡೆಯಲ್ಲಿ 1 ತಿಂಗಳ ಕೂಸನ್ನು ಮುಳುಗಿಸಿ ಕೊಂದ…

Next Post

ದೆವ್ವ ಬಿಡಿಸುವುದಾಗಿ ಚಿತ್ರಹಿಂಸೆ: ಅಸ್ವಸ್ಥರಾದ ಮಹಿಳೆ ಸಾವು: woman death

post-bars

Leave a Comment

Related post