ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಲೈನ್ ಗೆ ಚಾಲನೆ
ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ narendra modhi ಯೆಲ್ಲೋ ಲೈನ್ ಮೆಟ್ರೋ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ. R̤v road ಆರ್.ವಿ.ರೋಡ್ ನಿಂದ bommasandra ಬೊಮ್ಮಸಂದ್ರ ವರೆಗಿನ ನಮ್ಮnamma metro ಮೆಟ್ರೋ yellow line train ಯೆಲ್ಲೋ ಲೈನ್ ರೈಲು ಸಂಚರಿಸಲಿದೆ.
ಬೆಂಗಳೂರು: ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಲೈನ್ ಗೆ ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ. ಈ ವಿಚಾರ ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಖುಷಿ ತರುವಂತಾಗಿದೆ.
ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಯೆಲ್ಲೋ ಲೈನ್ ಮೆಟ್ರೋ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಆರ್.ವಿ.ರೋಡ್ ನಿಂದ ಬೊಮ್ಮಸಂದ್ರ ವರೆಗಿನ ನಮ್ಮ ಮೆಟ್ರೋ ಯೆಲ್ಲೋ ಲೈನ್ ರೈಲು ಸಂಚರಿಸಲಿದೆ. ಈಗಾಗಲೇ ಸುರಕ್ಷತಾ ಪರೀಕ್ಷೆ ನಡೆಸಿದ್ದ ರೈಲ್ವೆ ಸುರಕ್ಷತಾ ಆಯುಕ್ತರು ಚಾಲಕರಹಿತ ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದಾರೆ.
ಆ ಮೂಲಕ ಸಾಕಷ್ಟು ವರ್ಷಗಳಿಂದ ಕಾಯುತ್ತಿದ್ದ ಬೆಂಗಳೂರು ದಕ್ಷಿಣ ಭಾಗದ ಜನರ ಕನಸು ನನಸಾಗಲಿದೆ. ಜತೆಗೆ ಈ ವೇಳೆ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಕೂಡ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ.
ಇತ್ತೀಚೆಗೆ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಿಸಲು ರೈಲ್ವೆ ಸುರಕ್ಷತಾ ಆಯುಕ್ತರಿಂದ ಅನುಮತಿ ಸಿಕ್ಕಿದೆ. ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮೆಟ್ರೋ ಹಳದಿ ಮಾರ್ಗ ಸುಮಾರು 19.15 ಕಿಲೋ ಮೀಟರ್ ಉದ್ದವಿದೆ. ಸುಮಾರು 5,056.99 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 16 ನಿಲ್ದಾಣಗಳಿವೆ. ಇನ್ನು ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಮೆಟ್ರೋ ಫೇಸ್-3 ಮಾರ್ಗ 44.65 ಕಿಲೋ ಮೀಟರ್ ಉದ್ದ ಇರಲಿದೆ. 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ: