ಶಿಕ್ಷಕರು ತರಗತಿಯಲ್ಲಿ ಪಾಠ ಮಾಡುವಾಗ ಮೊಬೈಲ್ ಬಳಸುವಂತಿಲ್ಲ: Restricting mobile use
ಶಾಲೆಗಳಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸುವ ಸಲುವಾಗಿ ಮೊಬೈಲ್ ಗಳ ಬಳಕೆಯನ್ನು ಉಲ್ಲೇಖಿತ ಆದೇಶಗಳ ರೀತ್ಯಾ ಈಗಾಗಲೇ ನಿಷೇಧಿಸಲಾಗಿರುತ್ತದೆ.
ಬೆಂಗಳೂರು: ವಿದ್ಯಾರ್ಥಿಗಳು ಅಪರಾಧ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಮೊಬೈಲ್ ಬಳಕೆ ಅತಿ ಮುಖ್ಯ ಕಾರಣವಾಗಿದೆ. ಮಕ್ಕಳ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ.
ಮಕ್ಕಳಲ್ಲಿ ಮೊಬೈಲ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಮತ್ತು ಶಾಲಾ ವೇಳೆಯಲ್ಲಿ ಶಿಕ್ಷಕರ ಮೊಬೈಲ್ ಬಳಕೆಯನ್ನು ನಿಯಂತ್ರಣಕ್ಕೆ ಒಳಪಡಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಶಾಲೆಗಳಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವುದು ತಿಳಿದುಬಂದಿದೆ.
ಶಾಲೆಗಳಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸುವ ಸಲುವಾಗಿ ಮೊಬೈಲ್ ಗಳ ಬಳಕೆಯನ್ನು ಉಲ್ಲೇಖಿತ ಆದೇಶಗಳ ರೀತ್ಯಾ ಈಗಾಗಲೇ ನಿಷೇಧಿಸಲಾಗಿರುತ್ತದೆ.
ಯಾವುದೇ ಶಾಲೆಗಳಲ್ಲಿ ಶಾಲಾ ವೇಳೆಯಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ಅಥವಾ ಈ ಸಂಬಂಧ ದೂರುಗಳು ಬಂದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆಗಾರರಾಗುತ್ತಾರೆಂದು ತಿಳಿಸಿದೆ.
ಶಾಲೆಗಳ ಶಿಸ್ತನ್ನು ಕಾಪಾಡಿ, ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಯಾಗದಂತೆ ಕ್ರಮವಹಿಸುವ ಸಲುವಾಗಿ, ತಾಲ್ಲೂಕಿನ ಪ್ರತಿಯೊಂದು ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಮೊಬೈಲ್ ಉಪಯೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕೆಳಗಿನ ಕ್ರಮವನ್ನು ತಕ್ಷಣದಿಂದಲೇ ಅನುಷ್ಠಾನಗೊಳಿಸಲು ತಿಳಿಸಿದೆ.
- ಮುಖ್ಯೋಪಾಧ್ಯಾಯರನ್ನು ಹೊರತುಪಡಿಸಿ ಇತರೆ ಎಲ್ಲಾ ಭೋದಕ ಸಿಬ್ಬಂದಿಯು ಪ್ರಾರ್ಥನೆ ಬಳಿಕ ತಮ್ಮ ಮೊಬೈಲ್ ಗಳನ್ನು ಮುಖ್ಯೋಪಾಧ್ಯಾಯರ ಸುಪರ್ದಿಯಲ್ಲಿ ಹಸ್ತಾಂತರಿಸಬೇಕು.
- ತರಗತಿಗಳ ಅವಧಿಯಲ್ಲಿ ಮೊಬೈಲ್ ಬಳಕೆ ನಿಷಿದ್ಧವಾಗಿರಬೇಕು.
- ವಿದ್ಯಾರ್ಥಿಗಳಿಗೆ ಹೆಚ್ಚಿನ ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಸೂಚಿಸಿದೆ.
ಈ ನಿಯಮಗಳ ಕಟ್ಟುನಿಟ್ಟಿನ ಪಾಲನೆಯಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಉತ್ತಮ ಪರಿಣಾಮ ಬೀರಲಿದೆ. ಉನ್ನತವಾದ ಫಲಿತಾಂಶ ಪಡೆಯಲು ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ: