ಕೊರಟಗೆರೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಯನ್ನು ಕೊಂದು ತುಂಡರಿಸಿದ ಅಳಿಯ
ತುಮಕೂರು ಜಿಲ್ಲೆಯ ಗೃಹ ಸಚಿವ ಜಿ. ಪರಮೇಶ್ವರ್ ಅವರ ಮತಕ್ಷೇತ್ರದಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ತುಮಕೂರು: ಎರಡು ಮೂರು ದಿನಗಳಿಂದ ತುಮಕೂರು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಬೀದಿ ನಾಯಿಯೊಂದು ಮಾನವನ ದೇಹದ ಭಾಗ ಹಿಡಿದು ಅಡ್ಡಾಡಿದ ಸುದ್ದಿಗೆ ಇನ್ನೊಂದು ಟ್ವಿಸ್ಟ್ ಸಿಕ್ಕಿದೆ.
ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಶವದ ತುಂಡುಗಳು ಪತ್ತೆಯಾಗಿದ್ದವು.
ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊನೆಗೂ ಪೊಲೀಸರು ಶವದ ಜಾಡು ಹಿಡಿದು ಹೊರಟಾಗ ಸಹಜವಾಗಿ ಶಾಕ್ ಗೆ ಒಳಗಾಗಿದ್ದಾರೆ.
ತುಮಕೂರು ಜಿಲ್ಲೆಯ ಗೃಹ ಸಚಿವ ಜಿ. ಪರಮೇಶ್ವರ್ home minister dr̤ parameshwar ಅವರ ಮತಕ್ಷೇತ್ರದಲ್ಲಿ ಮಹಿಳೆಯನ್ನು ಕೊಲೆ murderಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ new twist ಸಿಕ್ಕಿದೆ.
ಮೃತ ಲಕ್ಷ್ಮೀದೇವಮ್ಮಳ ಅಳಿಯನೇ ಈ ಕೃತ್ಯ ನಡೆಸಿರೋದು ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ದಂತ ವೈದ್ಯನಾಗಿರುವ ಡಾ. ರಾಮಚಂದ್ರ ತನ್ನ ಸ್ನೇಹಿತ ಸತೀಶ್ ಹಾಗೂ ಕಿರಣನ ಜೊತೆ ಸೇರಿ ಹತ್ಯೆ ಮಾಡಿದ್ದಾನೆ.
ಕೋಳಾಲದಲ್ಲಿ ಇರುವ ಸ್ನೇಹಿತ ಸತೀಶ್ ಎಂಬಾತನ form house ಫಾರ್ಮ್ ಹೌಸ್ನಲ್ಲಿ ಕೊಲೆ ಮಾಡಿ ದೇಹದ ಭಾಗಗಳನ್ನು ಪೀಸ್ ಪೀಸ್ ಮಾಡಿ ಎಸೆಯಲಾಗಿತ್ತು. ಬಳಿಕ ಆರೋಪಿಗಳು ಧರ್ಮಸ್ಥಳ ಯಾತ್ರೆಗೆ ಹೋಗಿದ್ದರು. ಅತ್ತೆಯ ಕೊಲೆ ಆದರೂ ಅಳಿಯ ಸ್ಥಳದಲ್ಲಿ ಇಲ್ಲದಿರುವುದಕ್ಕೆ ಅನುಮಾನಗೊಂಡ ಪೊಲೀಸರು ವಿಚಾರಣೆ ಮಾಡಿದ್ದಾರೆ. ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂದು ತನಿಖೆಯಲ್ಲಿ ವ್ಯಕ್ತವಾಗಲಿದೆ.
ಇದನ್ನು ಓದಿ: