Back To Top

 ಮತ್ತೆ ಒಂದಾದ ಸೂಚನೆ ನೀಡಿದ ನಟಿ ಅಜಯ್ ರಾವ್ – ಸಪ್ನಾ ದಂಪತಿ
August 18, 2025

ಮತ್ತೆ ಒಂದಾದ ಸೂಚನೆ ನೀಡಿದ ನಟಿ ಅಜಯ್ ರಾವ್ – ಸಪ್ನಾ ದಂಪತಿ

ಪತ್ನಿ ಜತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸ ಟ್ವಿಸ್ಟ್

ಬೆಂಗಳೂರು: ಕನ್ನಡ ಚಿತ್ರರಂಗದ kannada film industry ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿತ್ತು.
ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗಿದ್ದು
ಪತ್ನಿ ಜತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ajay rao ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದ್ದು‌ ನಟ ಅಜೇಯ್ ರಾವ್ ಪತ್ನಿ ಸಪ್ನಾ ಅವರು ಇನ್ಸ್ಟಾಗ್ರಾಮ್ ಅಲ್ಲಿ ಪೋಸ್ಟ್ ಹಾಕಿ ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ.
ಪ್ರಿಯ ಸ್ನೇಹಿತರೇ ಮತ್ತು ಸಹೋದರರೇ, ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಾಗಿ ನಿಮ್ಮಲ್ಲಿ ಕೇಳಿಕೊಳ್ಳುತ್ತಿದೇನೆ.
ಮತ್ತು ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ, ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತೇನೆ ಎಂದು ಪೋಸ್ಟ್ ಹಾಕಿದ್ದಾರೆ.
ನಂತರ ಸಪ್ನಾ ಅಜಯ್ ರಾವ್ ಎಂದು ಬರೆದು ಹಂಚಿಕೊಂಡಿದ್ದು ಈಗ ಮತ್ತೆ ದಂಪತಿಗಳು ಒಂದಾದ ಸೂಚನೆ ಸಿಕ್ಕಿದಂತಾಗಿದ್ದು ನೆಟ್ಟಿಗರು ಸಂತಸ ವ್ಯಕ್ತಪಡಿಸುವ ಜೊತೆಗೆ ಸಾಮಾಜಿಕ ಜಾಲತಾಣಗಳ ವಿರುದ್ಧ ಮುಗಿ ಬಿದ್ದಿದ್ದಾರೆ.

ಇದನ್ನು ಓದಿ:

Prev Post

ನಿರಂತರವಾಗಿ ಮಗು ಅಳುತ್ತಿದೆ ಎಂದು ಹೊಡೆದ ತಾಯಿ: ಮಗು ಸಾವು

Next Post

ವರದಕ್ಷಿಣೆ ಕಿರುಕುಳ ಆರೋಪ: ಮದುವೆಯಾದ ಒಂದು ವರುಷಕ್ಕೆ ಪತ್ನಿ ಸಾವು, ಕೊಲೆ ಶಂಕೆ

post-bars

Leave a Comment

Related post