ಮಂಡ್ಯದಲ್ಲಿ ಹಿಂದೂ- ಮುಸ್ಲಿಂ ಗಲಾಟೆ ತಾರಕಕ್ಕೆ: ಲಾಠಿ ಚಾರ್ಜ್, ವ್ಯಾಪಕ ಪ್ರತಿಭಟನೆ
ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ganesha meravanige ವೇಳೆ ಜಿಹಾದಿ ಮನಸ್ಥಿತಿ ಹೊಂದಿದ ವ್ಯಕ್ತಿಗಳಿಂದ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಗಲಭೆ ನಡೆಸಿದ್ದನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸುತ್ತಿವೆ.
ಇಂದು ಪ್ರತಿಭಟನೆ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಹಿನ್ನೆಲೆಯಲ್ಲಿ ಮಸೀದಿ ಬಳಿ ಹಿಂದೂ ಕಾರ್ಯಕರ್ತರು ಕರ್ಪೂರ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೋಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಬೆಳಿಗ್ಗೆ 6 ರಿಂದ ನಾಳೆ ಮಧ್ಯಾಹ್ನ 12 ವರೆಗೆ ಪಟ್ಟಣದಾದ್ಯಂತ ಕಲಂ 163ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಹೊರಡಿಸಿ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅದೇಶಿಸಿದ್ದಾರೆ.
ಮಸೀದಿಯ ಮುಂದೆ ಹಸಿರು ಬಾವುಟ ನೆಟ್ಟಿದ್ದನ್ನು ಹಿಂದೂ ಕಾರ್ಯಕರ್ತರು ಕಿತ್ತು ಕೇಸರಿ ಬಾವುಟ ನೆಟ್ಟು ಜೈ ಶ್ರೀ ರಾಮ್ ಘೋಷಣೆ ಕೂಗಿದ್ದು ಎರಡೂ ಧರ್ಮಗಳ ನಡುವಿನ ದ್ವೇಷದ ವಾತಾವರಣ ನಿರ್ಮಾಣವಾಗಿದೆ.
ಎರಡೂ ಧರ್ಮದವರೂ ಪರಸ್ಪರ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: