ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಖಂಡಿಸುವ ಸಲುವಾಗಿ ಪಾಕಿಸ್ತಾನದ ಸಂಸತ್ತು ವಿಶೇಷ ಅಧಿವೇಶನವನ್ನು ಕರೆದಿತ್ತು. ಈ ವೇಳೆ ಪಾಕಿಸ್ತಾನದ ಸಂಸದರು ಆಡಿರುವ ಮಾತುಗಳು ಪಾಕ್ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.
ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ವ್ಯಾಪಕ ಸಂಘರ್ಷದ ಭೀತಿಯ ನಡುವೆಯೂ ಉದ್ವಿಗ್ನತೆ ಹೆಚ್ಚಾಗಿದೆ. ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿರುವ ಸೇನಾ ನೆಲೆಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ದಾಳಿ ಮಾಡುವ ಪಾಕಿಸ್ತಾನದ ಪ್ರಯತ್ನವನ್ನು ಭಾರತ ಗುರುವಾರ ರಾತ್ರಿ ವಿಫಲಗೊಳಿಸಿದೆ.
ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ( Rohit Sharma ) ಕೆಳಗಿಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ನಾಯಕನನ್ನು ಆಯ್ಕೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (Board of Control for Cricket in India -BCCI) ಆಯ್ಕೆದಾರರು ನಿರ್ಧರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ
ಮಿಡ್‌ನೈಟ್ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ. ಚೀನಾ ನಿರ್ಮಿತ ಜೆಎಫ್-17 ಯುದ್ಧ ವಿಮಾನ ಭಾರತದ (India) ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಬೀಳಿಸಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಇಲ್ಲಿಯವರೆಗೆ ಭಾರತ ಸೇನೆ ಅಧಿಕೃತವಾಗಿ ತಿಳಿಸಿಲ್ಲ.
ಪೆಹಲ್ಗಾಂ ಉಗ್ರ ದಾಳಿ ಬಳಿಕ ಭಾರತ ಪ್ರತಿ ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇಷ್ಟೇ ಅಲ್ಲ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಪೈಕಿ ಡಿಜಿಟಲ್ ಪ್ಲಾಟ್‌ಫಾರ್ಮ್ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.