April 23, 2025
ಸೌದಿ ಅರೇಬಿಯಾದ ಅಧಿಕೃತ ಭೇಟಿ ಅರ್ಧಕ್ಕೆ ಮೊಟಕುಗೊಳಿಸಿದ ನರೇಂದ್ರ ಮೋದಿ
ಕಾಶ್ಮೀರದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾದ ಅಧಿಕೃತ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ತಕ್ಷಣವೇ ಭಾರತಕ್ಕೆ ಮರಳಲು ನಿರ್ಧರಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್‌ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.
- 104
- 0
- 0